ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 11 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬೆಳಗಾವಿ ಮತತ್ ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 7 ರಿಂದ 11 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಅಲ್ಲಲ್ಲಿ ಮಳೆಯಾಗಬಹದು ಎಂದು ಹವಾಮಾನ ಇಲಾಖೆ ತಿಳಿಸಿದೆ.