News

ಕರಾವಳಿಯಲ್ಲಿ ಇಂದಿನಿಂದ ಭಾರಿ ಮಳೆ- ರೆಡ್ ಅಲರ್ಟ್ ಘೋಷಣೆ

05 August, 2020 10:37 AM IST By:

ಕರಾವಳಿ  ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವುದರಿಂದ ಆಗಸ್ಟ್ 5 ರಂದು ಭಾರತೀಯ ಹವಾಮಾನ ಇಲಾಖೆ  ರೆಡ್ ಅಲರ್ಟ್ (Red alert) ಘೋಷಿಸಿದೆ. ರೆಡ್‌ ಅಲರ್ಟ್‌ ವೇಳೆ ಕರಾವಳಿ ಭಾಗದಲ್ಲಿ 204.5 ಮಿಮೀಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೆ, ಆ. 6ರಿಂದ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ (Orange alert) ಇರಲಿದೆ. ಈ ವೇಳೆ 115.6 ಮಿಮೀಯಿಂದ 204.4 ಮಿಮಿವರೆಗೆ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮಳೆ ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಮುದ್ರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚನೆ ನೀಡಿದೆ. ಈ ಮೂರೂ ದಿನಗಳ ಕಾಲ ಕರಾವಳಿಯಾದ್ಯಂತ ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅಲ್ಲದೆ, ಮೀನುಗಾರರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.