1. ಸುದ್ದಿಗಳು

ಜುಲೈ 8 ರಿಂದ 12ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 8ರಿಂದ 12ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 8 ರಿಂದ 12 ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಜು.9ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ವಿಜಯಪುರ, ಯಾದಗಿರಿ, ಕೊಪ್ಪಳ ಸೇರಿದಂತೆ ವಿವಿಧೆಡೆ  ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. . ಸಮುದ್ರದಿಂದ ವೇಗವಾದ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

Published On: 08 July 2020, 10:20 AM English Summary: Heavy rain in costal karnataka until july 12th

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.