News

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ !

21 October, 2022 2:23 PM IST By: KJ Staff
weather alert

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ಪಿಎಂ ಉಜ್ವಲ ಯೋಜನೆಯಡಿ ಸರ್ಕಾರದಿಂದ ದೊರೆಯಲಿವೆ 2 ಉಚಿತ ಸಿಲೆಂಡರ್! ಯಾರು ಅರ್ಹರು ಗೊತ್ತೆ?

ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.   

ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ.

ಮೈಸೂರಿನ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

HURLನ ಬರೌನಿ ಸ್ಥಾವರವು ಯೂರಿಯಾ ಉತ್ಪಾದನೆಯನ್ನು ಪ್ರಾರಂಭಿಸುತ್ತದೆ 

ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಪಿಎಂ ಉಜ್ವಲ ಯೋಜನೆಯಡಿ ಸರ್ಕಾರದಿಂದ ದೊರೆಯಲಿವೆ 2 ಉಚಿತ ಸಿಲೆಂಡರ್! ಯಾರು ಅರ್ಹರು ಗೊತ್ತೆ?

ಮಲೆನಾಡಿನ ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 20ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.