News

Heavy Rain ರಾಜ್ಯದ ವಿವಿಧೆಡೆ ಸೋಮವಾರ ಭಾರೀ ಮಳೆ; ಹವಾಮಾನ ಇಲಾಖೆ ವರದಿ

08 May, 2023 1:49 PM IST By: Hitesh
Heavy rain in different parts of the state; Meteorological Department Report

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ.

ಇನ್ನು ಸೋಮವಾರ ಹಾಗೂ ಮಂಗಳವಾರ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ರಾಯಚೂರು,

ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್‌, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೇ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಇನ್ನು ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಕರಾವಳಿಯಲ್ಲಿ ಒಣಹವೆ ಇತ್ತು.

ಮಳೆ ಸೆಂ.ಮೀನಲ್ಲಿ: ರಾಮನಗರ, ಹುಣಸೂರಿನಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಾಲೂರು, ವೈ.ಎನ್‌. ಹೊಸಕೋಟೆ, ಕನಕಪುರದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.

ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರದಲ್ಲಿ ತಲಾ 4 ಸೆಂ.ಮೀ, ಸೈದಾಪುರ, ಹಾಸನ, ಕುಣಿಗಲ್‌,

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಇನ್ನು ರಾಜ್ಯದಲ್ಲಿಯೇ ಅತೀ ಗರಿಷ್ಠ ಉಷ್ಣಾಂಶವು 37 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ದಾಖಲಾಗಿದೆ.

Heavy rain in different parts of the state; Meteorological Department Report

ಮುಂದಿನ 48 ಗಂಟೆ: ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ

ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರಾವಳಿಯ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಚಿತ್ರ ಕೃಪೆ: Pexels