ದೇಶದ ಬಹುತೇಕ ರಾಜ್ಯಗಳಲ್ಲಿ ಮತ್ತೆ ಎರಡನೇ ಹಂತದಲ್ಲಿಯೂ ಭಾರಿ ಮಳೆ (Heavy rain) ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹಿಮಾಚಲಪ್ರದೇಶ, ಉತ್ತರಾಖಂಡ, ಪಂಜಾಬ್, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ ಹಾಗೂ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಕಾಶ್ಮೀರ, ಲಡಾಖ್, ಹರಿಯಾಣ, ಚಂಡೀಗಢ, ದೆಹಲಿ, ಸಿಕ್ಕಿಂ, ಮೇಘಾಲಯ, ಅರುಣಾಚಲಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿಯೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರಕುಸಿತದ ಕಾರಣ ಒಡಿಸ್ಸಾದ ಕೆಲ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ತಿಳಿಸಿದೆ.
ರಾಷ್ಟ್ರೀಯ ವಿಪತ್ತು ನಿವಾರಣಾ ಪಡೆ ಕೂಡ ಭಾರಿ ಮಳೆಯಾಗುವ ಪ್ರದೇಶಗಳಲ್ಲಿ ಜನ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.