News

ಸೆ. 20, 21 ರಂದು ರಾಜ್ಯದ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

20 September, 2020 8:22 AM IST By:

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಭಾಗದಲ್ಲಿ ಮೈಲ್ಮೈ ಸುಳಿಗಾಳಿ ತೀವ್ರತೆ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಹ ಆಗಿರುವುದರಿಂದ ರಾಜ್ಯದ ಎರಡು ದಿನ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೆ.20 ಮತ್ತು 21ರಂದು ‘ರೆಡ್ ಅಲರ್ಟ್’ ಘೋಷಿಸಿದೆ.  

ಕರಾವಳಿಯಲ್ಲಿ ಸೆ. 20 ರಿಂದ ಸೆ.23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರೆಡ್ ಅಲರ್ಟ್ ಜಿಲ್ಲೆಗಳಲ್ಲಿ 204 ಸೆಂ.ಮೀ. ಅಥವಾ ಅದಕ್ಕಿಂತ ಅಧಿಕ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಈ ಭಾಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಹಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?: ಮಂಗಳೂರು ವಿಮಾನ ನಿಲ್ದಾಣ ಹಾಗೂ ರಾಯಚೂರಿನಲ್ಲಿ ತಲಾ 8 ಸೆಂ.ಮೀ ಮಳೆಯಾಗಿದೆ. ಮೂಡುಬಿದರೆ, ಭಾಗಮಂಡಲ 5, ಉಡುಪಿ 4, ಪುತ್ತೂರು, ಉಪ್ಪಿನಂಗಡಿ 3, ಸುಳ್ಯ, ಕುಂದಾಪುರ, ಭಟ್ಕಳ, ಕಾರವಾರ 2, ಕಂಪ್ಲಿ, ಮೊಳಕಾಲ್ಮುರು, ಸೋಮವಾರಪೇಟೆ ಹಾಗೂ ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.