Krishi Jagran Kannada
Menu Close Menu

ರಾಜ್ಯದಲ್ಲಿ ಭಾರಿ ಮಳೆ, ಹಲವೆಡೆ ಪ್ರವಾಹ: 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ

Monday, 10 August 2020 09:14 AM
Heavy

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 10ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ (Heavy ran) ಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್(Red Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ (Orange alert) ಹಾಗೂ ಆ.12 ಮತ್ತು 13ರಂದು ಕಡಿಮೆ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' (Yellow alert) ಘೋಷಿಸಲಾಗಿದೆ.

ಮುಂಗಾರು ಬಿರುಸುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗರಿಷ್ಠ 4 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಕೊಡಗಿನಲ್ಲಿ ಸುರಿಯುತ್ತಿರುವ ನಿಂತರ ಮಳೆಯಿಂದ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ಥಳಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. 

ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್ ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ. ನದಿ ಪಾತ್ರಗಳಲ್ಲಿ ಪೊಲೀಸರು ಗಸ್ತು ತಿರುಗುವ ಮೂಲಕ ನದಿಗೆ ಇಳಿಯುವವರ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚಿಸಲಾಗಿದೆ. 

ಕೇರಳದ (Kerala) 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್

ತಿರುವನಂತಪುರ: ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು ಆಲಪ್ಪುಳ, ಇಡುಕ್ಕಿ, ಮಲಪ್ಪುರಂ, ವಯನಾಡ್, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಕೊಲ್ಲಂ, ಪತ್ತನಂತಿಟ್ಟ, ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್ ಮತ್ತು ಪಾಲಕ್ಕಾಡ್‌ನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

. ಮುಂಬೈನಲ್ಲಿ (Mumbai) ಮತ್ತೆ ಇಂದಿನಿಂದ ಮಳೆ:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಸೋಮವಾರದಿಂದ ಮುಂಬೈನಲ್ಲಿ ಮತ್ತೇ ಭಾರಿ ಮಳೆಯಾಗಲಿದೆ. ಮಧ್ಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ, ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Monsoon Heavy rain Red Alert orange alert , yellow alert fishers kjkannada krishijagran

Share your comments

Krishi Jagran Kannada Subscription

CopyRight - 2020 Krishi Jagran Media Group. All Rights Reserved.