News

ರಾಜ್ಯದಲ್ಲಿ ಐದು ದಿನ ಭಾರಿ ಮಳೆ : 7 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್

30 July, 2020 8:06 AM IST By:

ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ(Heavy rain) ಯಾಗುವ ಸಾಧ್ಯತೆಯಿದೆ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ (Orange alert)  ಘೋಷಿಸಲಾಗಿದೆ.

ದಕ್ಷಿಣ ಆಂಧ್ರಪ್ರದೇಶ ಹಾಗೂ ಉತ್ತರ ತಮಿಳುನಾಡು ಭಾಗದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ 5.8 ಕಿ.ಮೀ ಇರುವುದರಿಂದ ರಾಜ್ಯದಲ್ಲಿಯೂ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಬೀಸುತ್ತಿದ್ದು, ಗರಿಷ್ಟ 3.2 ಮೀಟರಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು (fishers) ಕಡಲಿಗೆ ಇಳಿಯಬಾರದೆಂದೆಂದು ಇಲಾಖೆ ಎಚ್ಚರಿಸಿದೆ.

ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ, ಧಾರವಾಡ, ತುಮಕೂರ ಹಾಗೂ ಮೈಸೂರ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ.

ಕೇರಳದಲ್ಲಿ ಮಳೆ; ರೆಡ್‌ ಅಲರ್ಟ್‌ (Red alert):

 ಕೇರಳಾದ್ಯಂತ ಬುಧವಾರ ಭಾರೀ ಮಳೆಯಾಗಿದ್ದು, ಇಡುಕ್ಕಿ ಜಿಲ್ಲೆಯಲ್ಲಿ ಶುಕ್ರವಾರದವರೆಗೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. 24 ಗಂಟೆಗಳಲ್ಲಿ 20.5 ಸೆ.ಮೀ.ನಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕರು ಜಾಗೃತರಾಗಿರುವಂತೆ ಸೂಚಿಸಲಾಗಿದೆ. ಕೊಟ್ಟಯಂ, ಎರ್ನಾಕುಳಂ, ತೃಶ್ಶೂರ್‌ ಮತ್ತು ಪಾಲಕ್ಕಾಡ್‌ ಜಿಲ್ಲೆಗಳಿಗೆ ಆರೆಂಟ್‌ ಅಲರ್ಟ್‌ ಘೋಷಿಸಲಾಗಿದೆ.