News

ಕರಾವಳಿಯಲ್ಲಿ ಗುರುವಾರ, ಶುಕ್ರವಾರ ಭಾರಿ ಮಳೆ ಸಾಧ್ಯತೆ-ಆರೆಂಜ್‌ ಅಲರ್ಟ್‌

08 September, 2020 6:31 AM IST By:

ರಾಜ್ಯದಲ್ಲಿ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈಋುತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದು,  ಸೆ. 9 ರಿಂದ12 ರವರೆಗೆ ಭಾರಿ ಮಳೆಯಾಗಲಿರುವುದರಿಂದ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 9 ಮತ್ತು 10 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಸೆ. 11 ಮತ್ತು 12 ರಂದು ಈ ಭಾಗದಲ್ಲಿ 115 ಮಿ.ಮೀನಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

 ಬೆಳಗಾವಿ, ಬೀದರ್, ಧಾರವಾಡ, ಗದಗ ಹಾಗೂ ಕಲಬುರಗಿಯಲ್ಲಿ ಸೆ.9 ರಿಂದ13 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಹಾಗೂ ಶುಕ್ರವಾರ ಭಾರಿ ಮಳೆ ಸುರಿಯುವ ನಿರೀಕ್ಷೆ ಇದ್ದು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.