ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ವರುಣದೇವ ತನ್ನ ಆರ್ಭಟ ಶುರು ಹಚ್ಚಿಕೊಂಡಿದ್ದಾನೆ. ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಅಬ್ಬರದ ಮಳೆಯಾಗಿದ್ದು ಸಾಕಷ್ಟು ಅವಾಂತರ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
PM Awas Gramin Yojana Big Update! ಏನದು? ಎಲ್ಲರೂ ಎಚ್ಚರ!
ಹೌದು ಇತ್ತ ಆಸಾನಿ ಚಂಡಮಾರುತದ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ವರುಣನ ಅಬ್ಬರದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸದ್ಯ ಬೇಸಿಗೆ ಕಾಲದಲ್ಲಿಯ ಈ ಮಳೆ ಇನ್ನು ನಾಲ್ಕೈದು ದಿನಗಳವರೆಗೆ ಮುಂದುವರೆಯಲಿದೆ ಎನ್ನಲಾಗುತ್ತಿದೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
ಸದ್ಯ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೌದು ಮೇ 18ರಿಂದ ಮೇ 21ರವರೆಗೆ ರಾಜ್ಯದ ಬೆಂಗಳೂರು ಹಾಗೂ ಕರಾವಳಿ ಭಾಗ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!
PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ
ಪ್ರಮುಖವಾಗಿ ಕರಾವಳಿಯಲ್ಲಿ ಮಂಗಳವಾರ ಹಾಗೂ ಬುಧವಾರ ಬಿಟ್ಟು ಬಿಡದೇ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಅತ್ಯಧಿಕ ಮಳೆಯಾಗುವ ಲಕ್ಷಣಗಳಿವೆ, ಈ ಕಾರಣದಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.
ಏಲ್ಲೆಲ್ಲಿ ರೆಡ್ ಅಲರ್ಟ್..?
ರಾಜ್ಯದ ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ರೆ, ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇವತ್ತು 'ರೆಡ್ ಅಲರ್ಟ್ ಘೋಷಿಸಲಾಗಿದೆ.
ಗುಡ್ ನ್ಯೂಸ್: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!