ರಾಜ್ಯದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.9ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ (Heavy rain)ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ (Red alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಸನ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೊ ಅಲರ್ಟ್ (Yellow alert) ಘೋಷಿಸಲಾಗಿದೆ.
. ರಾಜ್ಯ ಕರಾವಳಿಯಲ್ಲಿ ಆ. 9 ರಂದು ರೆಡ್ ಅಲರ್ಟ್, ಆ. 10ರಿಂದ ಆ. 13ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಪ್ರಕ್ಷುಬ್ಧವಿರಲಿದ್ದು, ಮೀನುಗಾರರು (Fishers) ಸಮುದ್ರಕ್ಕಿಳಿಯ ಬಾರದು ಎಂದು ಎಚ್ಚರಿಸಿದೆ.