News

Rain Karnataka ರಾಜ್ಯದಲ್ಲಿ ಮಳೆ ಅಬ್ಬರ: ಯೆಲ್ಲೋ ಅಲರ್ಟ್‌ ಘೋಷಣೆ

26 May, 2023 9:36 AM IST By: Maltesh
Heavy rain in Karnataka state: Yellow alert declared

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ; ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ. ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

27 ನೇ ಮೇ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.


ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಇನ್ನು ನೆರೆಯ ತಮಿಳುನಾಡಿನಲ್ಲಿ ಸುಳಿಗಾಳಿಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಶಿವಮೊಗ್ಗ,ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( Yellow Alert)ಘೋಷಣೆ ಮಾಡಲಾಗಿದೆ.