Krishi Jagran Kannada
Menu Close Menu

ರಾಜ್ಯದಲ್ಲಿ ಆ.1 ರಿಂದ 5ರವರೆಗೆ ಭಾರಿ ಮಳೆ ಸಾಧ್ಯತೆ

Saturday, 01 August 2020 09:13 AM

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆ.1ರಿಂದ 5ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾ
ಗುವ ನಿರೀಕ್ಷೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಐದೂ ದಿನ ಆರೆಂಜ್ ಅಲರ್ಟ್ (Ornage alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೊ ಅಲರ್ಟ್ (Yellow alert) ಘೋಷಿಸಲಾಗಿದೆ.

ಕರಾವಳಿಯಲ್ಲಿ (coastal) ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.1 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು (Fishers) ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

Yellow alert Orange Alert Coastal Fishers Kjkannada Krishi Jagran

Share your comments

Krishi Jagran Kannada Subscription

CopyRight - 2020 Krishi Jagran Media Group. All Rights Reserved.