News

ಆ. 6 ರಿಂದ 9 ರವರೆಗೆ ಕರಾವಳಿ ಮಲೆನಾಡಿನಲ್ಲಿ ಭಾರಿ ಮಳೆ

06 August, 2020 9:58 AM IST By:

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 6 ರಿಂದ 9 ರವರೆಗೆ ಭಾರಿ ಮಳೆ (Heavy rain) ಯಾಗಲಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red alert) ಘೋಷಿಸಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಉತ್ತರ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದರಿಂದ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂಗಾರು ಇನ್ನಷ್ಟು ಬಿರುಸುಗೊಂಡಿದೆ. ಕಳೆದ ಎರಡು ದಿನದಿಂದ ಈಗಾಗಲೇ ಮಳೆ ಆರಂಭಗೊಂಡಿದ್ದು, ಇನ್ನೂ ಎರಡು ದಿನ ಇದೇ ರೀತಿ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳುರ,ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುವುದರಿಂದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ:

ಕರಾವಳಿ ಸಮುದ್ರ ತೀರದಲ್ಲಿ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದೆ. ಭಾರಿ ಮಳೆಯಿಂದಾಗಿ ಸಮದ್ರದಲ್ಲಿಅಲೆಗಳು 6 ಮೀ. ಎತ್ತರಕ್ಕೇರುವ ಸಾಧ್ಯತೆ ಇದೆ. ಹೀಗಾಗಿ, ಇನ್ನೂ 3 ದಿನ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.