ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಟ ಮತ್ತೆ ಮುಂದುವರೆದಿದೆ. ಆಗಸ್ಟ್ 19 ರಿಂದ 23 ರವರೆಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿರುವುದರಿಂದ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ದಕ್ಷಿಣ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಆಗಗಸ್ಟ್ 19 ರಿಂದ 22 ರವರೆಗೆ ಮುಂಗಾರು ಅಬ್ಬರ ತಗ್ಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು (Fishers) ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
Share your comments