ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರು ಸುಗೊಂಡಿರುವುದರಿಂದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಸೆ. 5ರಿಂದ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು,ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 6ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.