ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 16ರಿಂದ 20 ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ‘ಯೆಲ್ಲೊ ಅಲರ್ಟ್’ (Yellow alert) ಘೋಷಿಸಲಾಗಿದೆ. ಅದೇ ರೀತಿಯಾಗಿ ರಾಜ್ಯದ ಒಳನಾಡಿನ ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ.16 ರಂದು ಭಾರಿ ಮಳೆ (Heavyrain) ಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಹೆಚ್ಚು ಗಾಳಿ ಬೀಸಲಿದ್ದು, ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕಲ್ಯಾಣ ಕರ್ನಾಟಕದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಭಾನುವಾರ ಮುಂದುವರೆಯುವ ಸಾಧ್ಯತೆಯಿದೆ..
ಮಳೆ-ಎಲ್ಲಿ,ಎಷ್ಟು? : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಟ್ಟಿಗೆಹಾರ 7, ಭಾಗಮಂಡಲ, ಕೊಡಗು 4, ಬೆಳ್ತಂಗಡಿ, ಹೊಸನಗರ, ಆಗುಂಬೆ, ಮಡಿಕೇರಿ 3, ರಾಯಚೂರು, ವಿರಾಜಪೇಟೆ 2, ಮೂಡುಬಿದರೆ, ಪುತ್ತೂರು, ಮಂಗಳೂರು, ಅಂಕೋಲಾ, ಭಟ್ಕಳ, ಬೆಳಗಾವಿ, ಹಾಸನ, ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.