ರಾಜ್ಯದಲ್ಲಿ ಜುಲೈ 18 ರಿಂದ 22ರವರೆಗೆ ರಾಜ್ಯದ ಎಲ್ಲಾ ಕಡೆ ಭಾರಿ ಮಳೆಯಾಗುವ ನಿರೀಕ್ಷೆಯೆದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಹವಾಮಾನದಲ್ಲಿ ಬದಲಾವಣೆಯಾಗಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದರಿಂದ ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಭಾನುವಾರ ಬೆಳಗಿನವರೆಗಿನ 48 ತಾಸುಗಳ ಅವಧಿಯಲ್ಲಿ ಕರಾವಳಿಯ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಮಳೆಯಾಗಲಿದೆ
ಕರಾವಳಿಯಲ್ಲಿ ಜು.18 ಆರೆಂಜ್ ಅಲರ್ಟ್ (Orange alert) ಮತ್ತು ಜು. 19ರಂದು ಎಲ್ಲೊ ಅಲರ್ಟ್ (Yellow alert) ಘೋಷಿಸಲಾಗಿದೆ. ಸಮುದ್ರ ಪ್ರಕ್ಷುಬ್ಧವಿರಲಿದ್ದು, ಮೀನುಗಾರರು (Fishers) ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಸಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ಜು.20, 21ರಂದು ಯೆಲ್ಲೋ ಅಲರ್ಟ್ ಇರಲಿದ್ದು, ಈ ಅವಧಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.