ಕಳೆದೆರೆಡು ದಿನಗಳಿಂದ ಕೊಡಗಿನಲ್ಲಿ ಕ್ಷಿಣಿಸಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆ 12 ಮತ್ತು 13 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 60ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಐದು ದಿನಗಳಿಂದ ಕರಾವಳಿ ಹಾಗೂ ಒಳನಾಡಿನಾದ್ಯಂತ ಧಾರಾಕಾರ ಮಳೆ (Heavy rain) ಯಾಗಿದೆ. ಆ.13ರಿಂದ ಮಳೆ ಪ್ರಮಾಣ ತಗ್ಗುವ ಸಾಧ್ಯತೆ ಇತ್ತು. ಆದರೆ ಹವಾಮಾನ ಇಲಾಖೆಯ ಪ್ರಕಾರ ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗಾಗಿ ಯೆಲ್ಲೋ ಅಲೋರ್ಟ್ ಘೋಷಿಸಸಲಾಗಿದೆ.