News

ಮಹಾರಾಷ್ಟ್ರದ ಮುಂಬೈ, ಥಾಣೆ ಸೇರಿದಂತೆ ಹಲವೆಡೆ ಭಾರಿ ಮಳೆ- ಎರಡು ದಿನ ರೆಡ್ ಅಲರ್ಟ್

04 August, 2020 1:45 PM IST By:

ವಾಣಿಜ್ಯ ನಗರಿ ಮುಂಬೈಯಲ್ಲಿ (Mumbai) ಸೋಮವಾರ ರಾತ್ರಿ ಹಾಗೂ ಮಂಗಳವಾರ (ಆ. 4 ರಂದು) ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಬಹುತೇಕ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲದೇ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿರುವ ನಿಟ್ಟಿನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ (Red alert) ಜಾರಿಗೊಳಿಸಿದೆ.

ಭಾರೀ ಗಾಳಿ, ಮಳೆಯಿಂದಾಗಿ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಅಲರ್ಟ್ ಸಂದೇಶ ರವಾನಿಸಲಾಗಿದೆ. ಅಷ್ಟೇ ಅಲ್ಲ ಸಮುದ್ರ ಪ್ರದೇಶ ಮತ್ತು ತಗ್ಗುಪ್ರದೇಶಗಳಿಗೆ ತೆರಳದಂತೆ ಜನರಿಗೂ ಸೂಚನೆ ನೀಡಲಾಗಿದೆ. ಮುಂಬೈ ಉಪನಗರ ಹಾಗೂ ಉತ್ತರ ಕೊಂಕಣ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಹಲವೆಡೆ ನೆರೆ ಉಂಟಾಗಿದ್ದು ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯಾಗಿದೆ. ಮುಂಬೈಯ ಕಿಂಗ್ಸ್ ಸರ್ಕಲ್, ಹಿಂದಮಾತಾ, ಪೋಸ್ಟಲ್ ಕಾಲೋನಿ, ಅಂಧೇರಿ ಸಬ್ ವೇ ಪ್ರದೇಶಗಳು ಜಲಾವೃತಗೊಂಡಿವೆ. ಪರಿಹಾರ ಕಾರ್ಯಚರಣೆ ಪ್ರಗತಿಯಲ್ಲಿದೆ. ಥಾಣೆಯ ಪಾಲ್ವರ್, ರಾಯಗಡ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಸಮುದ್ರದಲ್ಲಿ 4.51 ಮೀಟರ್ ನಷ್ಟು ಎತ್ತರದ ಅಲೆಗಳು ಮೇಲೆಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ(ಭಾರತೀಯ ಹವಾಮಾನ ಇಲಾಖೆ) ಪ್ರಕಾರ, ಮಹಾರಾಷ್ಟ್ರದ ಮುಂಬೈ, ಥಾಣೆ ಮತ್ತು ರಾಯಗಢ್ ಜಿಲ್ಲೆಗಳಲ್ಲಿ ಆಗಸ್ಟ್ 4 ಮತ್ತು 5ರಂದು ಭಾರೀ ಮಳೆಯಾಗಲಿದೆ ಎಂದು ಹೇಳಿದೆ.

ಮಲೆನಾಡು, ಕರಾವಳಿಯಲ್ಲಿ ಭಾರಿ ಗಾಳಿ ಮಳೆ:

 ಕರ್ನಾಟಕ ರಾಜ್ಯದ ಕರಾವಳಿ (Coastal), ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಈ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದೆ.

ಉಡುಪಿ, ಕಾರ್ಕಳ, ಮಂಗಳೂರು, ಬಂಟ್ವಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ