News

Heavy Rain ರಾಜ್ಯದ ಹಲವು ಜಿಲ್ಲೆಯಲ್ಲಿ ಇಂದು, ನಾಳೆ ಧಾರಾಕಾರ ಮಳೆ: ಹವಾಮಾನ ಇಲಾಖೆ

26 June, 2023 9:37 AM IST By: Hitesh
Heavy rain in many districts of the state today, tomorrow: Meteorological Department

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆ ಇತ್ತು.

ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರೀ ಮಳೆ: ಭಾನುವಾರ ಕುಂದಾಪುರ, ಕೋಟ, ಮಂಕಿಯಲ್ಲಿ ತಲಾ 11 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರದಲ್ಲಿ 10 ಸೆಂ.ಮೀ, ಹೊನ್ನಾವರ,

ಶಿರಾಲಿ ಪಿಟಿಒದಲ್ಲಿ ತಲಾ 9 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಗೇರುಸೊಪ್ಪಿನಲ್ಲಿ 8 ಸೆಂ.ಮೀ, ಅಂಕೋಲ ಹಾಗೂ ಕಾರ್ಕಳದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.

ಉಳಿದಂತೆ ಕುಮಟಾ, ಕಾರವಾರ, ಗೋಕರ್ಣ, ಜೀವರ್ಗಿ, ಮಂಠಾಳದಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಕದ್ರಾ, ಕ್ಯಾಸಲ್‌ ರಾಕ್‌, ಚಿಂಚೋಳಿ,

ಚಿತ್ತಾಪುರ, ಸುಲೇಪೇಟ, ಕಲಬುರಗಿಯ ಎಲ್ಲ ಜಿಲ್ಲೆಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಕೊಲ್ಲೂರು, ಪಣಂಬೂರು, ಯಡ್ರಾಮಿ, ಕಮಲಾಪುರ ಸೇರಿದಂತೆ ವಿವಿಧ ಭಾಗದಲ್ಲಿ ತಲಾ 4 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಸೋಮವಾರ ಹಾಗೂ ಮಂಗಳವಾರ ರಾಜ್ಯದ ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು- ಗುಡುಗು ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45

ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.

ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ

ಬೆಂಗಳೂರು ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ

ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಇರಲಿದೆ.

ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

image courtesy pexels