ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.
ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ಹಾಗೂ ಶುಕ್ರವಾರ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ; ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ
ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆಯ ಎಚ್ಚರಿಕೆ
ಮುಂದಿನ 24 ಗಂಟೆಯ ಅವಧಿ: ರಾಜ್ಯದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು,
ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮುಂದಿನ 48 ಗಂಟೆ ಅವಧಿ: ರಾಜ್ಯದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ,
ಮೈಸೂರು, ಚಾಮರಾಜನಗರದಲ್ಲಿ ಹಾಗೂ ಕೋಲಾರ ಜಿಲ್ಲೆಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು ಮುನ್ನೆಚ್ಚರಿಕೆ
ಇನ್ನು ಎರಡು ದಿನದ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚುಗುಡುಗು ಸಾಧ್ಯತೆ ಇದೆ.
ಅಲ್ಲದೇ ಗಾಳಿಯ ವೇಗವು 40ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ವರೆಗೂ ಮತ್ತು ಒಳನಾಡಿನ ಒಂದೆರಡು
ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಭಾರೀ ಮಳೆ: ಇನ್ನು ಬುಧವಾರ ಮಾಗಡಿ ಹಾಗೂ ಬೆಂಗಳೂರಿನಲ್ಲಿ 7 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ಬೆಂಗಳೂರು ಹಾಗೂ ಬೆಂಗಳೂರು ಸುತ್ತಮುತ್ತ: ಬೆಂಗಳೂರು ನಗರ ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ
ಮುಂದಿನ ಎರಡು ದಿನಗಳ ಅವಧಿಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.
ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಕಡೆಗಳಲ್ಲಿ ಬಲವಾದ ಬಿರುಗಾಳಿ ಸಹಿತ ಮಳೆ/ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉಳಿದಂತೆ ಗರಿಷ್ಠ ಉಷ್ಣಾಂಶವು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Image Source: pexels.com