News

ರಾಜ್ಯದಲ್ಲಿ ಮುಂಗಾರು ಆರ್ಭಟ –ಕರಾವಳಿ ಭಾಗದಲ್ಲಿ ಆರೇಂಜ್ ಅಲರ್ಟ್

17 July, 2020 9:15 AM IST By:

ರಾಜ್ಯದಲ್ಲಿ ಮುಂಗಾರು ಆರ್ಭಟ ತೀವ್ರಗೊಂಡಿದ್ದು, ಇಲೈ 19 ಮತ್ತು 20 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿ ಭಾಗಗಳಲ್ಲಿ ಐದು ದಿನಗಳವರೆಗೆ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ  ಜುಲೈ 17, 18 ರಂದು ಯಲ್ಲೋ ಅಲರ್ಟ್ (Yellow alert), 19,20 ರಂದು ಈ ಮೂರೂ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ

 ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಜು.17ರಂದು ಯೆಲ್ಲೋ ಅಲರ್ಟ್, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ (orange alert) ಇರಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ಜು.20, 21ರಂದು ಯೆಲ್ಲೋ ಅಲರ್ಟ್ ಇರಲಿದ್ದು, ಈ ಅವಧಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ

ಎಚ್ಚರಿಕೆ: ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು (Fishers) ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.