ರಾಜ್ಯದ ಹಲವೆಡೆ ಮಳೆ (Heavy Rain) ಅಬ್ಬರ ಜೋರಾಗಿದ್ದು, ಅವಾಂತರ ಸೃಷ್ಟಿಯಾಗಿದೆ. ಕೆಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿರಿ: ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಬಗ್ಗೆ ರೈತರು ಅಸಮಾಧಾನ..!
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಅಂಕೋಲಾ, ಜೋಯಿಡಾ, ಕುಮಟಾ, ಕಾರವಾರ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳಿಂದ ಬಿಡುವುಕೊಟ್ಟಿದ್ದ ಮಳೆರಾಯ ಇಂದು (ಜುಲೈ 4) ಮತ್ತೆ ಅಬ್ಬರಿಸುತ್ತಿದೆ.
ಇನ್ನೂ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ ಘಟ್ಟದಲ್ಲಿ ಭೂಕುಸಿತ (Landslide) ಸಾಧ್ಯತೆ ಹಿನ್ನಲೆ. ಸುರಕ್ಷಿತವಾಗಿ ವಾಹನ ಸಂಚಾರ ಮಾಡಲು ಜಿಲ್ಲಾಡಳಿತ ಮನವಿ ಮಾಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಕಳಸ ಬಳಿಯ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೊಡಗಿನಲ್ಲಿ ಮಳೆಯಿಂದ ಮಡಿಕೇರಿ ತಾಲೂಕಿನ ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದೆ. ಈ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲು ಭಾಗಮಂಡಲ ಜನರು ಒತ್ತಾಯಿಸಿದ್ದಾರೆ.
109 ಜೀವಂತ ಪ್ರಾಣಿಗಳ ಕಳ್ಳಸಾಗಣೆ ಮಾಡುತ್ತಿದ್ದ ಭಾರತೀಯ ಮಹಿಳೆಯರ ಬಂಧನ!
ಬೆಳಗಿನಿಂದ ಎಡೆ ಬಿಡದೆ ಸುರಿಯುತ್ತಿರೋ ಮಳೆಯಿಂದ ಕೊಡಗಿನಲ್ಲಿ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿವೆ.
ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಆಗಾಗ ಬೀಳುತ್ತಿರುವ ಮಳೆಗೆ ಹಾವೇರಿ ಜನರು ಹೈರಾಣಾಗಿದ್ದಾರೆ ಇನ್ನು ಕೆಲಕಡೆ ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಳೆರಾಯ ಸಂತಸ ಮೂಡಿಸಿದೆ.
ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ
IMD ಗುಜರಾತ್, ಒಡಿಶಾ, ಜಾರ್ಖಂಡ್, ಮುಂಬೈ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲಿ ಲಘುವಾಗಿ ಸಾಧಾರಣ ಮಳೆಯ ಜೊತೆಗೆ ಅನೇಕ ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನೀಡಿದೆ.
ರೈತರಿಗೆ ಗುಡ್‌ನ್ಯೂಸ್; ಶೀಘ್ರದಲ್ಲೇ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ!
ಇದರೊಂದಿಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೇ ದಕ್ಷಿಣ ರಾಜ್ಯವಾದ ಚೆನ್ನೈ ಮತ್ತು ತಮಿಳುನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನಗಳ ಕಾಲ ಗುಜರಾತ್, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ, ಕಾರೈಕಲ್ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದೇ ಮಹಾರಾಷ್ಟ್ರದಲ್ಲಿ ಜುಲೈ 4ರಿಂದ 7ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
Share your comments