News

ಜೂನ್‌ 15ರವೆರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

11 June, 2023 3:59 PM IST By: Kalmesh T
Heavy rain in the state till June 15: Meteorological department forecast

ವಾಡಿಕೆಗಿಂತ ಈ ಬಾರಿ ಮುಂಗಾರು ತಡವಾಗಿ ರಾಜ್ಯಕ್ಕೆ ಆಗಮನವಾಗಿದೆ ಈಗಾಗಲೇ ರೈತರು ಕಂಗಾಲಾಗಿದ್ದರು ಕೂಡ. ಆದರೆ, ಇದೀಗ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ 

ರಾಜ್ಯಕ್ಕೆ ಶನಿವಾರ ಮುಂಗಾರು ಪ್ರವೇಶವಾಗಿದ್ದು, ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, 

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.