ಕೇರಳಕ್ಕೆ ಮಾನ್ಸೂನ್ ಪ್ರವೇಶ ಹಾಗೂ ಬಿಪೋರ್‌ಜಾಯ್ ಚಂಡಮಾರುತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಿರುವುದು ವರದಿ ಆಗಿದೆ.
ಪುತ್ತೂರು ಹಾಗೂ ಮಂಗಳೂರಿನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಾಣಿ, ಕದ್ರಾ, ಕೋಟ, ಪಣಂಬೂರು, ಮೂಲ್ಕಿ, ಉಪ್ಪಿನಂಗಡಿ, ಧರ್ಮಸ್ಥಳ,
ಅಂಕೋಲಾ, ಗೋಕರ್ಣ, ಕುಮಟಾ, ಕುಂದಾಪುರ ಹಾಗೂ ಹುಮನಾಬಾದ್ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಿದೆ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು 40 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಮಳೆ ಮುನ್ಸೂಚನೆ: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ
ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ
ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚುಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ ಮುನ್ಸೂಚನೆ
ಗರಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ
2ರಿಂದ 3 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.
ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ವಾತಾವರಣ
ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,
ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ/ ಮಿಂಚುಗುಡುಗು ಸಾಧ್ಯತೆ ಬಹಳಷ್ಟಿದೆ.
ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಚಿತ್ರಕೃಪೆ: pexels