News

ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ.. ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

17 May, 2022 4:35 PM IST By: Maltesh
Heavy Rain

ನೈತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷಿತ ದಿನಗಳ ಮುಂಚೆಯೇ ಮಳೆಯು ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಮುಂದುವರೆದಿದೆ. ಪರಿಣಾಮ ಮುಂಜಾಗೃತಾ ಕ್ರಮವಾಗಿ ಭಾರತೀಯ ಹವಮಾನ ಇಲಾಖೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದದೆ.

ಆಸಾನಿ ಚಂಡಮಾರುತದ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಸಾಕಷ್ಟು ಅವಂಆತರಗಳು ಸೃಷ್ಟಿಯಾಗಿವೆ ವರುಣನ ಅಬ್ಬರದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ.  ಸದ್ಯ ಬೇಸಿಗೆ ಕಾಲದಲ್ಲಿಯ ಈ ಮಳೆ ಇನ್ನು ನಾಲ್ಕೈದು ದಿನಗಳವರೆಗೆ ಮುಂ ದುವರೆಯಲಿದೆ ಎನ್ನಲಾಗುತ್ತಿದೆ.

ಪೈಲ್ವಾನ್ ಕಿಚ್ಚ ಸುದೀಪ್ ಕೊಟ್ಟ ಗುನ್ನಾಕೆ ಮಕಾಡೆ ಮಲಗಿದ ಅಜಯ್ ದೇವಗನ್!

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

ಸದ್ಯ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಹೌದು ಮೇ 18ರಿಂದ ಮೇ 21ರವರೆಗೆ ರಾಜ್ಯದ ಬೆಂಗಳೂರು ಹಾಗೂ ಕರಾವಳಿ ಭಾಗ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಯಾವ  ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಅಸಾನಿ ಏಫೆಕ್ಟ್‌ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಹೀಗಾಗಿ  ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್‌ ಅಲರ್ಟ್‌ ಘೋಷಿಸಿದೆ.

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

3ನೇ ಮಗುವಿಗೆ ಜನ್ಮ ನೀಡಿದರೆ 11 ಲಕ್ಷ ರೂಪಾಯಿ ಬೋನಸ್ ನೀಡತ್ತೆ ಈ ಕಂಪನಿ.. ಜೊತೆಗೆ 1 ವರ್ಷ ರಜೆ! ಏನಿದು Policy?

ಪ್ರಮುಖವಾಗಿ ಕರಾವಳಿಯಲ್ಲಿ ಮಂಗಳವಾರ ಹಾಗೂ ಬುಧವಾರ ಬಿಟ್ಟು ಬಿಡದೇ  ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಅತ್ಯಧಿಕ ಮಳೆಯಾಗುವ ಲಕ್ಷಣಗಳಿವೆ, ಈ ಕಾರಣದಿಂದ  ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್‌ ಹೇಳಿದ್ದಾರೆ.

ಯೆಲ್ಲೋ ಅಲರ್ಟ್‌:

ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ  ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, , ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೇ 17ರಿಂದ 20ವರೆಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ

IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!