News

ರಾಜ್ಯದ 17 ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

17 December, 2020 6:00 AM IST By:

ಕರ್ನಾಟಕದ 17 ಜಿಲ್ಲೆಗಳಲ್ಲಿ ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಡಿಸೆಂಬರ್ 18 ರಿಂದ 20ರವರೆಗೆ  ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ.  ಗುರುವಾರ ಮೋಡ ಕವಿದ ವಾತಾವರಣದೊಂದಿಗೆ, ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಗುಡುಗು ಮಿಂಚು ಸಹಿತ  ಮಳೆಯಾಗಲಿದೆ. ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಡಿ.18ರಿಂದ 20ರವರೆಗೆ ನ ಬೆಳಗ್ಗೆ ಮಂಜು ಕವಿದ ವಾತಾವರಣ ಉಂಟಾಗಲಿದ್ದು, ತಾಪಮಾನದ ಪ್ರಮಾಣದಲ್ಲಿ ಒಂದೆರಡು ಡಿಗ್ರಿಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಗರಿಷ್ಠ 27 ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಂಭವವಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.