ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನು 2 ದಿನ ಭಾರೀ ಮಳೆ (2 more days of heavy rain) ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರವೂ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗಿದೆ. ಭಾನುವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ (Rain in different districts) ಮಳೆಯಾಗಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಮುಖ್ಯ ಪ್ರಮಾಣದಲ್ಲಿ ಮಳೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಮೂಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ತಲಾ 4 ಸೆಂ. ಮೀ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಣಿ, ಪಣಂಬೂರಿನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳ ಹಾಗೂ ಹಾಸನದಲ್ಲಿ
ತಲಾ 1 ಸೆಂ.ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನ ಭಾರೀ ಮಳೆ
ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮುಂದಿನ 24 ಗಂಟೆ: ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಗುಡುಗು ಮಿಂಚಿನ ಸಾಧ್ಯತೆ ಇದೆ
ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆ ಎಚ್ಚರಿಕೆ
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರು ದಿನ ಮಳೆಯಾಗಲಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ
ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಸೇರಿದಂತೆ
ವಿವಿಧ ಜಿಲ್ಲೆಗಳಲ್ಲಿ ಸೋಮವಾರದಿಂದ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ವಿಧ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು
ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರದಿಂದ ಎರಡು ದಿನ ಭಾರೀ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಬೆಂಗಳೂರು ಹಾಗೂ ರಾಜ್ಯದ ಹವಾಮಾನ ಹೇಗಿದೆ ?
ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ತಾಪಮಾನವನ್ನು ನೋಡುವುದಾದರೆ, ಹೊನ್ನಾವರ ಮತ್ತು ಕಾರವಾರದಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಪೆಣಂಬೂರು ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಭಾಗಶಃ ಮೋಡ
ಕವಿದ ವಾತಾವರಣವಿರಲಿದ್ದು, ಸಂಜೆ/ ರಾತ್ರಿ ವೇಳೆಗೆ ಬಹಳ ಹಗುರ ಮಳೆಯಾಗುವ ಸಾಧ್ಯತೆಗಳಿವೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
Share your comments