News

Heavy Rain ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

11 September, 2023 3:44 PM IST By: Hitesh
Heavy rain in various states: Meteorological department forecast!

ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಭಾರೀ ಮಳೆ ಆಗಲಿದೆ.

ಅಲ್ಲದೇ ಕರ್ನಾಟಕದ ಗಡಿ ಭಾಗಗಳಾದ ಗೋವಾ-ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ.

ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಮತ್ತು ಒಡಿಶಾದಲ್ಲಿ ಮಂಗಳವಾರದವರೆಗೆ ಭಾರೀ ಮಳೆಯಾಗಲಿದೆ

ಎಂದು ಭಾರತೀಯ  ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅಲ್ಲದೇ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ

ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ರಾಜ್ಯದಾದ್ಯಂತ ಸಾಮಾನ್ಯವಾಗಿತ್ತು.

ಆದರೆ, ಕರಾವಳಿಯಲ್ಲಿ ವ್ಯಾಪಕವಾಗಿದ್ದು, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಭಾಗಮಂಡಲದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಪಣಂಬೂರು,

ಪುತ್ತೂರು, ಕೆಂಭಾವಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಸಿದ್ದಾಪುರ, ಜೀವರ್ಗಿ,

ನೆಲೋಗಿ, ಯಡ್ರಾವಿ, ಶೋರಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿ, ಕೋಟ, ಕುಂದಾಪುರ ಸೇರಿದಂತೆ ಮಳೆಯಾಗಿರುವುದು ವರದಿ ಆಗಿದೆ.

ಮುಂದಿನ 24 ಗಂಟೆಯ ಅವಧಿ

ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿರುಗಾಳಿ ಮುನ್ನೆಚ್ಚರಿಕೆ

ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ

40ರಿಂದ 45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.

ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಮುನ್ಸೂಚನೆ ನೀಡಿದೆ. 

Photo Courtesy: Pexels