ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನ ಮಳೆ!
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಸಾಧರಣೆ ಮಳೆ ಆಗುವ ಸಾಧ್ಯತೆ ಇದೆ.
ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.
ಧೈರ್ಯ ಮೆರೆದ ಐವರು ಮಕ್ಕಳಿಗೆ “ಶೌರ್ಯ” ಪ್ರಶಸ್ತಿಯ ಗರಿ!
ಮಲೆನಾಡು: ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹಾಸನ,
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಡುಪಿ ಜಿಲ್ಲೆಯ ಹಲವೆಡೆ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
2022ರ ಸೆಪ್ಟೆಂಬರ್‌ನಲ್ಲಿ ಖನಿಜ ಉತ್ಪಾದನೆ 4.6% ಹೆಚ್ಚಳ
ಕಳೆದ 24 ಗಂಟೆಗಳಲ್ಲಿ ಪಣಂಬೂರಿನಲ್ಲಿ 4 ಸೆಂ.ಮೀ ಮಳೆ ಆಗಿದೆ. ದೇವನಹಳ್ಳಿ, ಬೆಳ್ತಂಗಡಿ, ಧರ್ಮಸ್ಥಳ, ಬ್ರಹ್ಮಾವರ,ಚಿಂತಾಮಣಿ,
ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು, ಕಾರ್ಕಳ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ದೊಡ್ಡಬಳ್ಳಾಪುರದಲ್ಲಿ ತಲಾ ಒಂದು ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.