News

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸಾಧ್ಯತೆ: ಎಂಟು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌!

02 November, 2022 2:57 PM IST By: Hitesh
rain

ರಾಜ್ಯದ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಎಂಟು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ.   

ಟಾಟಾ ಗ್ರೂಪ್‌ನಿಂದ 45 ಸಾವಿರ ಜನರಿಗೆ ಉದ್ಯೋಗಾವಕಾಶ!

ಮಲೆನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ,

ಮಂಡ್ಯ, ಮೈಸೂರು ಹಾಗೂ ರಾಮನಗರದಲ್ಲಿ ಗುರುವಾರ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. 

ಇದನ್ನೂ ಓದಿರಿ: TWITTER ದೂರುವುದಿದ್ದರೆ ದೂರಿ; ತಿಂಗಳಿಗೆ ಎಂಟು ಡಾಲರ್‌ ಕೊಡಿ ಎಂದ ಎಲಾನ್‌ ಮಸ್ಕ್‌!

ಮೈಸೂರು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ವಿಜಯನಗರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಅತಿ ಕಡಿಮೆ

ಮಳೆಯಾಗುವ ಸಾಧ್ಯತೆಯಿದೆ ಮತ್ತು ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ಬೆಂಗಳೂರು ನಗರದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.   

LPG ಗ್ರಾಹಕರಿಗೆ ಸಿಹಿಸುದ್ದಿ: ಸಿಲಿಂಡರ್‌ ದರದಲ್ಲಿ ಭಾರೀ ಇಳಿಕೆ! 

ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧೆಡೆ ಸಾಧಾರಣ ಮಳೆ ಆಗಿದ್ದು, ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿತ್ತು.

ರಾಜ್ಯದಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆ ಆಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.