ಬಂಗಾಳಕೊಲ್ಲಿಯಲ್ಲಿ ಡಿ.7ಕ್ಕೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ
ಕೆಲವು ಆಯ್ದ ಭಾಗದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
38.30 ಲಕ್ಷ ಕೋಟಿ ಡಿಜಿಟಲ್ ಪಾವತಿ; ಚಿನ್ನ- ಬೆಳ್ಳಿ ದರ ತುಸು ಹೆಚ್ಚಳ!
ಉಳಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಸಾಧಾರಣ ಅಥವಾ ಹಗುರದಿಂದ ಕೂಡಿದ ಮಳೆ ಆಗಿದೆ. ದಕ್ಷಿಣ ಒಳನಾಡಿನ
ಒಂದೆರಡು ಕಡೆಗಳಲ್ಲಿ ಮಳೆ ಆಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು.
Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಯಾವುದೇ ಪ್ರದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ. ರಾಜ್ಯದ ಸಮತಟ್ಟಾದ
ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳ ಕಾಲ ರಾಜ್ಯದ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ಬಹಳಷ್ಟು ಸಾಧ್ಯತೆ ಇದೆ.
ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನರ್ಹ ಬದಲಾವಣೆಗಳು ಕಂಡುಬಂದಿಲ್ಲ.
ಇನ್ನು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು
ಅಥವಾ ಮಂಜುಮುಸುಕಿದ ವಾತಾವರಣ ಇರುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆ ಮೋಡಕವಿದ ವಾತಾವರಣ ಇರಲಿದೆ.
ಉಳಿದಂತೆ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ
ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.