News

ಕೊಡಗು ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆ ಸಾಧ್ಯತೆ!

01 November, 2022 4:48 PM IST By: Hitesh
rain

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rbi: ಆರ್‌ಬಿಐ: ದೇಶದ 9 ಬ್ಯಾಂಕ್‌ಗಳಲ್ಲಿ ಡಿಜಿಟಲ್‌ ಕರೆನ್ಸಿ ಲಭ್ಯ! 

ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.  

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ರಾಜ್ಯದ ವಿವಿಧ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ತುಂಬಾ ಹಗುರದಿಂದ ಹಗುರವಾದ ಮಳೆ ಆಗುವ ಸಾಧ್ಯತೆ ಇದೆ.  

ವಾಟ್ಸಪ್‌ನಲ್ಲೂ ಲಭ್ಯ ಮೆಟ್ರೋ ಟಿಕೆಟ್‌; ಈ ಸೇವೆ ಪ್ರಾರಂಭಿಸಿದ ದೇಶದ ಮೊದಲ ಮೆಟ್ರೋ! 

ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು: ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ.

ಕರಾವಳಿ: ಇನ್ನು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಅತಿ ಮಳೆಯಾಗುವ ಸಾಧ್ಯತೆಯಿದ್ದು,

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Gkvk: ಕೃಷಿ ಮೇಳಕ್ಕೆ ಜಿಕೆವಿಕೆ ಸಜ್ಜು; ಈ ಬಾರಿಯ ವಿಶೇಷತೆಗಳೇನು?