1. ಸುದ್ದಿಗಳು

ಜುಲೈ 23ರಿಂದ ಭಾರಿ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್

Rain

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಜುಲೈ 23 ರಿಂದ ಇನ್ನೆರೆಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಹಾಗಾಗಿ ಜುಲೈ 23, 24 ರಂದು  ಯಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ. ಈ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ಮಳೆ (Rain)ಯಾಗಲಿದೆ. ಸಮುದ್ರ ಪ್ರಕ್ಷುಬ್ಧವಿರಲಿದ್ದು, ಮೀನುಗಾರರು (fishers) ಸಮುದ್ರಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಲಬುರಗಿ, ಬೀದರ್, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ವಿಜಯಪುರದಲ್ಲಿ ಜುಲೈ 26 ರಂದು ಹಾಗೂ ದಕ್ಷಿಣ ಕನ್ನಡ , ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಜುಲೈ 26, 27 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಂತರ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, (Thunder) ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

Published On: 22 July 2020, 08:58 AM English Summary: Heavy rain likely from July 23 - Yellow Alert

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.