ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಜುಲೈ 23 ರಿಂದ ಇನ್ನೆರೆಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಹಾಗಾಗಿ ಜುಲೈ 23, 24 ರಂದು ಯಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ. ಈ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ಮಳೆ (Rain)ಯಾಗಲಿದೆ. ಸಮುದ್ರ ಪ್ರಕ್ಷುಬ್ಧವಿರಲಿದ್ದು, ಮೀನುಗಾರರು (fishers) ಸಮುದ್ರಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಲಬುರಗಿ, ಬೀದರ್, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ವಿಜಯಪುರದಲ್ಲಿ ಜುಲೈ 26 ರಂದು ಹಾಗೂ ದಕ್ಷಿಣ ಕನ್ನಡ , ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಜುಲೈ 26, 27 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಂತರ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, (Thunder) ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.