ಬಂಗಾಳಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿಯಲ್ಲಿ ಅಲ್ಲಲ್ಲಿ ಭಾರೀ ಮಳೆ ಆಗುತ್ತಿದೆ.
ಮಾಂಡೌಸ್ ಪ್ರಭಾವದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಾಂಡೌಸ್ ಚಂಡಮಾರುತ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆ
ಡಿಸೆಂಬರ್ 10ಕ್ಕೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಡಿಸೆಂಬರ್ 11 ಮತ್ತು 12ಕ್ಕೆ ಚಾಮರಾಜನಗರ, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರತೀಯ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಿಸಿದೆ.
ಡಿಸೆಂಬರ್ 10ರಿಂದ ಡಿಸೆಂಬರ್ 12ರ ವರೆಗೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ಯಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದಂತೆ ಕಳೆದ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ.
Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ಉಳಿದಂತೆ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ
ಮಂಜುಮುಸುಕುವ ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.