News

ಜುಲೈ 26 ರಂದು ರಾಜ್ಯದಲ್ಲಿ ಭಾರಿ ಮಳೆ- ಯೆಲ್ಲೋ ಅಲರ್ಟ್ (yellow alert)

26 July, 2020 9:33 AM IST By:

ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಈ ಭಾಗದ ಹಲವು ಜಿಲ್ಲೆಗಳಲ್ಲಿ ಇದೇ 26ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೈಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಐದು ದಿನ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಯೆಲ್ಲೋ ಅಲರ್ಟ್(yellow alert): ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು
ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ (ಜುಲೈ 26) ಭಾನುವಾರದಂದು 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಮೀನುಗಾರರಿಗೆ (Fishers)ಎಚ್ಚರಿಕೆ: ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.7 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.