News

Rain ಕರಾವಳಿಯಲ್ಲಿ ಭಾರೀ ಮಳೆ; ಮೀನುಗಾರರಿಗೆ ಎಚ್ಚರಿಕೆ!

14 July, 2023 11:55 AM IST By: Hitesh
Heavy rain on the coast; Warning to fishermen!
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ಇನ್ನು ಎರಡು ದಿನ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿಯಲ್ಲಿ ಮಳೆ ಚುರುಕಾಗಿತ್ತು. ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ಅಲ್ಲದೇ ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಅತೀ ಭಾರೀ ಪ್ರಮಾಣದ ಮಳೆ

ಕರಾವಳಿಯ ವಿವಿಧ ಭಾಗದಲ್ಲಿ ಭಾರೀ ಮಳೆಯಾಗಿದೆ. ಕರಾವಳಿಯ ಉಡುಪಿಯ ಕೊಲ್ಲೂರಿನಲ್ಲಿ ಬರೋಬ್ಬರಿ 18 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರದಲ್ಲಿ 17 ಸೆಂ.ಮೀ, ಗೇರುಸೊಪ್ಪದಲ್ಲಿ 13 ಸೆಂ.ಮೀ ಹಾಗೂ ಮಂಕಿಯಲ್ಲಿ 12 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಉಳಿದಂತೆ ಕದ್ರಾ ಹಾಗೂ ಕೋಟಾದಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ. ಪಣಂಬೂರಿನಲ್ಲಿ 9 ಸೆಂ.ಮೀ, ಲಿಂಗನಮಕ್ಕಿಯಲ್ಲಿ 8 ಸೆಂ.ಮೀ,

ಶಿರಾಲಿ ಪಿಟಿಒ, ಉಡುಪಿ, ಕುಂದಾಪುರ ಹಾಗೂ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಭಾಗದಲ್ಲಿ

ತಲಾ ಏಳು ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಮುಂದಿನ 24 ಗಂಟೆಯ ಅವಧಿ: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ

ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಯ ಅವಧಿ: ಅದೇ ರೀತಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಿಂಚು ಗುಡುಗು

ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯ ಅವಧಿ:

ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಂದೆರಡು ಕಡೆಗಳಲ್ಲಿ ಅತೀ ಭಾರವಾದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೊಡಗು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆ ಅವಧಿ: ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು

ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಗಂಟೆಯ ಅವಧಿ: ಕರಾವಳಿಯ ಎಲ್ಲ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು,

ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40ರಿಂದ

45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬಂದಿಲ್ಲ.

ಬೆಂಗಳೂರು ನಗರ ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶ

ಬೆಂಗಳೂರು ನಗರ ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರು

ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದವಾತಾವರಣವಿರಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸಲಿದೆ.

ಅಲ್ಲದೇ ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

Photo Source: pexels.com