News

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ-ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

08 August, 2020 9:18 AM IST By:

ರಾಜ್ಯದ ಕರಾವಳಿ, ಮಲೆನಾಡು ಮತ್ತು ಇತರ ಪ್ರದೇಶಗಳಲ್ಲಿ ಮುಂಗಾರು ಮಳೆಯ ಅಬ್ಬರ ಶುಕ್ರವಾರ ಸ್ವಲ್ಪಮಟ್ಟಿಗೆ ತಗ್ಗಿದೆ. ಆದರೂ ಶನಿವಾರ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ (Heavy rain) ಸಾಧ್ಯತೆಯಿರುವುದರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಆ. 11 ರವರೆಗೆ ಆರೇಂಜ್ ಅಲರ್ಟ್ (Orange alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.