1. ಸುದ್ದಿಗಳು

ಭಾರೀ ಮಳೆ : ಈ ಜಿಲ್ಲೆಯ ಶಾಲಾ ಕಾಲೇಜುಗಳಿ ರಜೆ ಘೋಷಣೆ

Maltesh
Maltesh
Heavy rain: School and colleges of this district have been declared holiday

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಈ ಮೊದಲು ನೀಡಿದ್ದ ರಜೆಯನ್ನು ಮುಂದುವರೆಸಲಾಗಿದೆ. ಹವಾಮಾನ ಇಲಾಖೆಯ ರೆಡ್‌ ಅಲರ್ಟ್ ಮುನ್ಸೂಚನೆಯಂತೆ  ದಿನಾಂಕ 05.07.2023 & 06.07.2023 ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದ್ದು,

ಮುಂದುವರೆದು, ದಿನಾಂಕ:07.07.2013 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:07.07.2013 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಸರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಐ.ಟಿ.ಐ. ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.

ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸೂಚಿಸಿದೆ.

ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. 4. ಈಗ ಮಳೆಗಾಗಿ ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನನ್ನವನ್ನು ಸರಿದೂಗಿಸುವಂತೆ ತಿಳಿಸಿದೆ.

ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರ, ವಿದ್ಯಾರ್ಥಿಗಳ ನೀರು ಇರುವ ನಗು ವುದೇಶ, ಕರ ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.

ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ, ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 0820-2574802

Published On: 07 July 2023, 11:07 AM English Summary: Heavy rain: School and colleges of this district have been declared holiday

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.