ಈ ಬಾರಿ ರಾಜ್ಯದಲ್ಲಿ ಪ್ರತಿ ವರ್ಷಕ್ಕಿಂತ ಮೊದಲೇ ಮುಂಗಾರು ಮಳೆ ಪ್ರವೇಶವನ್ನು ಪಡೆದಿದೆ.May ಅಂತ್ಯಕ್ಕೆ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶದ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿತ್ತು. ಆದರೆ ಮುಂಗಾರು ನಿಗದಿತ ಅವಧಿಗೆ ಮುಂಚಿತವಾಗಿಯೇ ರಾಜ್ಯದಲ್ಲಿ ಪ್ರವೇಶ ಪಡೆದು ಅಬ್ಬರ ಸೃಷ್ಟಿಸುತ್ತಿದೆ. ಪರಿಣಾಮ 17 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ರೆ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ರಾಜ್ಯದ ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ರೆ, ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇವತ್ತು 'ರೆಡ್ ಅಲರ್ಟ್ ಘೋಷಿಸಲಾಗಿದೆ.
Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!
PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ
ಸದ್ಯ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಮುಂಜಾಗೃತಾ ದೃಷ್ಟಿಯಿಂದ ಅಲ್ಲಲ್ಲಿ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು ದಿನ ಪೂರ್ತಿ ಮಳೆಯಾಗುವ ಸಾಧ್ಯತೆ ಇದೆ. ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಫ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಇತ್ತ ಮಳೆನಾಡು ಶಿವಮೊಗ್ಗ ದಲ್ಲಿ ಕೂಡ ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾದ್ಯಂತ ಶಾಲೆಗಳಿಗೆ ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲ ಗಂಟೆಗಳಿಂದ ಶಿವಮೊಗ್ಗ ತಾಲೂಕಿನಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು ಮತ್ತೆ ನಾಳೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರತಿ ವರ್ಷ June 1 ಅಥವಾ ಅದರ ಬಳಿಕ ಕೇರಳದ ಕರಾವಳಿಗೆ ಮುಂಗಾರು ಪ್ರವೇಶ ಆಗುತ್ತಿತ್ತು. ಆದರೆ ಈ ಬಾರಿ ಮೇ 27ಕ್ಕೆ ಕೇರಳಕ್ಕೆ, ನಂತರ 3 ದಿನದಲ್ಲಿ ರಾಜ್ಯಕ್ಕೆ ಮಾನ್ಸೂನ್ ಮಾರುತುಗಳು ಕರ್ನಾಟಕವನ್ನು ಪ್ರವೇಶಿಸಲಿವೆ ಎಂದು ತಜ್ಞರು ಲೆಕ್ಕಾಚಾರ ನೀಡಿದ್ದರು.
ಸಾಮಾನ್ಯ ಜನರಿಗೆ ಮಾನ್ಸೂನ್ ಮಳೆ ಬಂದರೆ ಬಿಸಿಲು ಕಡಿಮೆ ಆಗುತ್ತೆ. ಆದರೆ ಈ ಮಳೆ ಕೃಷಿ ವಲಯದಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ. ಮಾನ್ಸೂನ್ ಮಳೆಯ ಜೊತೆಯಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತವೆ.
50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.