News

ಆಶ್ಲೇಷ ಮಳೆಗೆ ರಾಜ್ಯ ತತ್ತರ ಕರಾವಳಿಯಲ್ಲೂ ಮಳೆ ಜೋರು

07 August, 2020 9:52 AM IST By:

ಕಳೆದ ಕೆಲ ದಿನಗಳಿಂದ ಮಲೆನಾಡು, ಕರಾವಳಿ ಭಾಗ ಸೇರಿ ರಾಜ್ಯದ 10 ಕ್ಕೂಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆ (Heavy rain) ಯಿಂದಾಗಿ ತಲಕಾವೇರಿ ಮತ್ತು ಚಾರ್ಮಾಡಿ ಘಾಟಿಯ ಕೆಲವೆಡೆ ಭೂಕುಸಿತ ಸಂಭವಿಸಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರವಾಹದ (Flood) ಸ್ಥಿತಿ ತಲೆದೋರಿದೆ.

ತಲಕಾವೇರಿ ಸಮೀಪದ ಬ್ರಹ್ಮಗಿರಿ ಬೆಟ್ಟ ಕುಸಿದಿದ್ದುತಲಕಾವೇರಿಯ ಅರ್ಚಕರ ಕುಟುಂಬದ ಐದು ಮಂದಿ ನಾಪತ್ತೆಯಾಗಿದ್ದಾರೆ. ಮಳೆ ಸಂಬಂಧಿ ಅವಘಡಗಳಿಂದ ಒಟ್ಟು ಎಂಟು ಜನ ಮೃತಪಟ್ಟಿದ್ದಾರೆ. 

ಬಾಳೆಹೊನ್ನೂರು ಬಳಿಯ ಅಂಡವಾನೆ ಗ್ರಾಮದ ಶಂಕರ (26) ಗುರುವಾರ ಬೆಳಿಗ್ಗೆ ಗದ್ದೆ ಬಳಿ ಸಾಗುವಾಗ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಕಡೂರು ತಾಲ್ಲೂಕಿನ ಯಗಟಿ ಹೋಬಳಿಯ ಜಕ್ಕನಹಳ್ಳಿಯ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಪರಮೇಶ್ವರಪ್ಪ (38) ಬುಧವಾರ ಮೃತಪಟ್ಟಿದ್ದಾರೆ.

ಕಲಘಟಗಿ ತಾಲ್ಲೂಕಿನ ಹಿರೇಕೇರಿ ಯಲ್ಲಿ ನೆಲಮಟ್ಟದ ಸೇತುವೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಶ್ರೀದೇವಿ ನುಮಂತಪ್ಪ ಗಾಣಿಗೇರ (8) ನೀರಿನಲ್ಲಿ ಕೊಚ್ಚಿಹೋಗಿದ್ದಾಳೆ.

ಸಕಲೇಶಪುರ ತಾಲ್ಲೂಕಿನ ಕ್ಯಾಮನ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕ್ಲಾಪುರ ಮಠ ಗ್ರಾಮದಲ್ಲಿ ದನಗಳನ್ನು ಮೇಯಿಸಲು ಹೋಗಿದ್ದ ಸಿದ್ದಯ್ಯ (60) ಎತ್ತಿನಹೊಳೆ ದಾಟು ವಾಗ ಬುಧವಾರ ಸಂಜೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಗುರುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಮನೆಯ ಗೋಡೆ ಕುಸಿದುಶಿವನಂಜಯ್ಯ (70) ಎಂಬು ವರು ಮೃತಪಟ್ಟಿದ್ದಾರೆ.

ಮತ್ತೆ ಕುಸಿದ ಭೂಮಿ: ಕೊಡಗು ಜಿಲ್ಲೆಯಲ್ಲಿ ಸತತ ಮೂರನೇ ವರ್ಷವೂ ಭೂಕುಸಿತ ಸಂಭವಿಸಿದೆ. ಬ್ರಹ್ಮಗಿರಿಯಲ್ಲಿ ಬುಧವಾರ ತಡರಾತ್ರಿ ಭೂಕುಸಿತವಾಗಿದ್ದುಗುಡ್ಡದ ಮಣ್ಣು ಸುಮಾರು ಐದು ಕಿ.ಮೀ. ದೂರ ದವರೆಗೂ ಜಾರಿಕೊಂಡು ಹೋಗಿದೆ. ತಲ‌ಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್‌ (80), ಅವರ ಪತ್ನಿ ಶಾಂತಾ (70), ಆನಂದತೀರ್ಥ (86), ಸಹಾಯಕ ಅರ್ಚಕರಾದ ಕಿರಣ್‌ ಹಾಗೂ ಪವನ್‌ ಮಣ್ಣಿನ ಅಡಿಯಲ್ಲಿ ಸಿಲುಕಿರಬಹುದು ಎನ್ನಲಾಗಿದೆ.

ಮುಖ ನದಿ (Rivers) ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತೀರ ಪ್ರದೇಶದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಉತ್ತರ ಕನ್ನಡಶಿವಮೊಗ್ಗಚಿಕ್ಕಮಗಳೂರುಹಾವೇರಿಬೆಳಗಾವಿಧಾರವಾಡಗದಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂಕುಸಿತ ಉಂಟಾಗಿ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ಉಪವಿಭಾಗದಲ್ಲಿ 6, ಬಾಗಲಕೋಟೆ ಜಿಲ್ಲೆಯಲ್ಲಿ 3, ಹಾವೇರಿ ಜಿಲ್ಲೆಯಲ್ಲಿ ಸೇರಿದಂತೆ 11 ಸೇತುವೆಗಳು (Bridges) ಮುಳುಗಡೆಯಾಗಿವೆ. ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಮೈಸೂರು ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದುನದಿಗಳು ತುಂಬಿ ಹರಿಯುತ್ತಿವೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆ ಮುಳುಗಿದೆ. ಕಬಿನಿ ಜಲಾಶಯದಿಂದ 50 ಸಾವಿರ ಕ್ಯುಸೆಕ್‌ ನೀರು ಹೊರಬಿಡಲಾಗಿದೆ. ಕೃಷ್ಣಾವೇದಗಂಗಾದೂಧ ಗಂಗಾಘಟಪ್ರಭಾಮಲಪ್ರಭಾತುಂಗಾಭದ್ರಾಹೇಮಾವತಿಕಾಳಿಶರಾವತಿಗಂಗಾವಳಿಅಘನಾಶಿನಿ ನದಿಗಳುಧಾರವಾಡ ಜಿಲ್ಲೆಯ ತುಪ್ಪರಿಬೆಣ್ಣಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ತತ್‌ಕ್ಷಣ ಪರಿಹಾರ: ಸಿಎಂ
ಗೊಳಗಾದ ಕುಟುಂಬಗಳಿಗೆ ತತ್‌ಕ್ಷಣ 10,000 ರೂ. ಪರಿಹಾರದ ಜತೆಗೆ ಸಂಪೂರ್ಣ ಮನೆ ಹಾನಿಯಾಗಿದ್ದರೆ  5 ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಬಿಎಸ್‌ವೈ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಳ್ಳಿಗಳ ಶಾಲಾ-ಕಾಲೇಜುಗಳನ್ನೇ ನಿರಾಶ್ರಿತರ ಕೇಂದ್ರವನ್ನಾಗಿಸಿ ಎಲ್ಲ ಸೌಲಭ್ಯ ಕಲ್ಪಿಸಬೇಕು ಎಂದು ಆದೇಶ ನೀಡಿದ್ದಾರೆ.