ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ 3 ಜಿಲ್ಲೆಗಳಲ್ಲಿ ಆರೇಂಜ್ ಹಾಗೂ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಂದು ಘೋಷಿಸಲಾಗಿದೆ
ಈಗಾಗಲೇ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ.ಕಳೆದ ಒಂದು ವಾರದಿಂದ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ಮತ್ತೆ ಜೂ. 19 ರಂದು ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ವಾತಾರವಣದಲ್ಲಿ ತೇವಾಂಶದಿಂದ ಕೂಡಿದ ಗಾಳಿ ಚಲನೆಯಾಗುತ್ತದೆ ಇದರಿಂದಾಗಿ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಳೆಯಾಗಲಿದೆ.ಜೂನ್ 16 ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತದೆ ಎದು ಹವಾಮಾನ ಇಲಾಖೆ ಹಳದಿ ಎಚ್ಚರಿಗೆ ನೀಡಿದೆ.