News

Heavy Rain ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

13 June, 2023 10:34 AM IST By: Hitesh
Heavy Rain ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ,

ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. 

ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ

ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಬಹಳಷ್ಟು ಸಾಧ್ಯತೆ

ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 48 ಗಂಟೆಯಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು,

ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಯ ಅವಧಿ: ಮುಂದಿನ 48 ಗಂಟೆಯ ಅವಧಿಯಲ್ಲೂ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ

ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ. 

Ration Card Eligibility: ನೀವೂ ಕೂಡ ಕರ್ನಾಟಕ ಪಡಿತರ ಚೀಟಿ ಪಡೆಯಬಹುದಾ, ಅರ್ಹತೆ ಏನು ?

ಗರಿಷ್ಠ ಉಷ್ಣಾಂಶದ ಮುನ್ಸೂಚನೆ

ಮುಂದಿನ 48 ಗಂಟೆ: ಗರಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ

ಸಾಮಾನ್ಯಕ್ಕಿಂತ 2ರಿಂದ 3ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ನಿಂದ

55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುನ್ಸೂಚನೆ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,

ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕೆಲವೊಮ್ಮೆ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೇ ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ

ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

Ration Card ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ, ಮತ್ತೊಮ್ಮೆ ಕಾರ್ಡ್‌ ಅಪ್ಲೈ ಮಾಡುವುದೇಗೆ ?

ಚಿತ್ರಕೃಪೆ: pexels