1. ಸುದ್ದಿಗಳು

ರಾಜ್ಯದೆಲ್ಲೆಡೆ ಭಾರೀ ಮಳೆ ಸೂಚನೆ; ಶಾಲಾ-ಕಾಲೇಜುಗಳಿಗೆ ರಜೆ!

Kalmesh T
Kalmesh T
Heavy rain warning across the state; School-college vacation!

ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ. ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿರಿ: ರೈತರಿಗೆ ಗುಡ್‌ನ್ಯೂಸ್‌: ಸರ್ಕಾರದಿಂದ ಅತಿ ಹೆಚ್ಚು ಸಬ್ಸಿಡಿಯಲ್ಲಿ ದೊರೆಯಲಿವೆ ಕೃಷಿ ಡ್ರೋಣ್‌ಗಳು!

ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಕೂಡ ತೊಂದರೆ ಅನುಭವಿಸುತ್ತಿದ್ದಾರೆ.

ಹವಾಮಾನದಲ್ಲಿ ಕ್ಷಣಕ್ಷಣಕ್ಕೂ ಬದಲಾವಣೆ ಕಾಣುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರೈತರೆ ಗಮನಿಸಿ; ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ !

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ, ಶಿವಮೊಗ್ಗ ಕೊಡುಗು, ವರುಣ ಸೇರಿದಂತೆ ಹಲವೆಡೆ ನಿರಂತರ ಮಳೆಯಾಗುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಏತನ್ಮಧ್ಯೆ, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಚರಂಡಿಗಳು ತುಂಬಿ ಹರಿಯುತ್ತಿವೆ.

ಸತತ ಮಳೆಯಾಗುತ್ತಿರುವುದರಿಂದ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ನದಿಗಳ ಹರಿವು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದೆ.

ಗುಡ್‌ನ್ಯೂಸ್‌: ಇಲ್ಲಿದೆ ರೈತರ ಮಕ್ಕಳಿಗೆ 50% ಮೀಸಲಾತಿ; ಏನಿದು ಗೊತ್ತೆ?

ಮುಂದಿನ ಕೆಲವು ಗಂಟೆಗಳಲ್ಲಿ ಹವಾಮಾನ ಚಟುವಟಿಕೆಗಳು

ಮುಂದಿನ ಕೆಲವು ಗಂಟೆಗಳಲ್ಲಿ, ಕೊಂಕಣ ಮತ್ತು ಗೋವಾ ಕರಾವಳಿ ಕರ್ನಾಟಕ ಮತ್ತು ಗುಜರಾತ್‌ನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಧ್ಯಪ್ರದೇಶ, ವಿದರ್ಭ, ಉತ್ತರ ಮಧ್ಯ ಮಹಾರಾಷ್ಟ್ರ, ಗುಜರಾತ್‌ನ ಉಳಿದ ಭಾಗಗಳು, ದಕ್ಷಿಣ ರಾಜಸ್ಥಾನ, ಕೇರಳ ಮತ್ತು ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ (IMD) ಕರ್ನಾಟಕ, ಗುಜರಾತ್, ಒಡಿಶಾ, ಜಾರ್ಖಂಡ್, ಮುಂಬೈ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಭಾರೀ ಮತ್ತು ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.

Published On: 08 July 2022, 03:34 PM English Summary: Heavy rain warning across the state; School-college vacation!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.