1. ಸುದ್ದಿಗಳು

ಅಕ್ಟೋಬರ್‌ 11ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಸೂಚನೆ! ಇಲ್ಲಿದೆ ಜಿಲ್ಲಾವಾರು ವಿವರ..

Kalmesh T
Kalmesh T
Heavy rain warning in Karnataka till October 11!

ಅಕ್ಟೋಬರ್ ತಿಂಗಳ ಆರಂಭದಲ್ಲೇ ದೇಶಾದ್ಯಂತ ಮಳೆ, ಚಳಿ ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ಹವಾಮಾನ ಇಲಾಖೆ ಪ್ರಕಾರ ಮಳೆ ಇನ್ನೂ ಕೆಲವು ದಿನ ಮುಂದುವರಿಯಲಿದೆ. ಹಾಗಾದರೆ ಇಂದಿನ ಹವಾಮಾನ ಹೇಗಿರಲಿದೆ ಎಂದು ತಿಳಿಯೋಣ ಬನ್ನಿ

ಇದನ್ನೂ ಓದಿರಿ:DA Hike: ಸರ್ಕಾರಿ ನೌಕರರಿಗೆ ಮತ್ತು ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್‌ ಸುದ್ದಿ! ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕಾಗಿದೆ. ಮುಂದಿನ ನಾಲ್ಕು ದಿನ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ದಿನ ಬಿಟ್ಟು ದಿನ ಜೋರು ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿತ್ಯ ನಿರಂತರವಾಗಿ ಹವಾಮಾನದಲ್ಲಿ ಏರಿಳಿತಗಳು ಉಂಟಾಗುತ್ತಿವೆ. ಈ ಕಾರಣದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಟ ಮುಂದುವರಿದಿದೆ. ವಿವಿಧ ಪ್ರದೇಶಗಳಲ್ಲಿ ಒಂದು ದಿನ ಜೋರು ಮಳೆ ಬಂದರೆ, ಮರು ದಿನ ವಾತಾವರಣ ಸಹಜ ಸ್ಥಿತಿಗೆ ಮರಳುತ್ತಿದೆ.

ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..

ಹೊರತಾಗಿ ಮುಂದಿನ ನಾಲ್ಕು ದಿನ (ಅಕ್ಟೋಬರ್ 11ರವರೆಗೆ) ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ದಿನಬಿಟ್ಟು ದಿನ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ. ಅಕ್ಟೋಬರ್ 8 ಮತ್ತು 11ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ.

ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 10 ಮತ್ತು 11ರಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,

ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್‌ ಪೂರೈಕೆ ಸಿಎಂ ಬೊಮ್ಮಾಯಿ!

ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಈ ಕಾರಣಕ್ಕೆ ಇಷ್ಟು ಜಿಲ್ಲೆಗಳಿಗೆ ಎರಡು ದಿನ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ಇನ್ನು ಕಳೆದ 24ಗಂಟೆಗಳಲ್ಲಿ ಗೋಕರ್ಣ, ಗುಂಡಗುರ್ತಿಯಲ್ಲಿ ತಲಾ 6ಸೆಂಟಿ ಮೀಟರ್ ಬೀದರ್, ಮುನಿರಾಬಾದ್, ರಾಯಭಾಗ್, ಹಿಡಕಲ್ ಆಣೆಕಟ್ಟು, ಕಮಲಾಪುರ, ಸೈದಾಪುರ ಪ್ರದೇಶಗಳಲ್ಲಿ ತಲಾ 5ಸೆಂ.ಮೀ. ಮಳೆ ಆಗಿದೆ. ಉಳಿದಂತೆ ಶಹಾಪುರ, ನವಲಗುಂದ, ಮಾನ್ವಿ, ಕಲಘಟಗಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಾಧಾರಣವಾಗಿ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Published On: 08 October 2022, 12:48 PM English Summary: Heavy rain warning in Karnataka till October 11!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.