News

ರಾಜ್ಯದಲ್ಲಿ ಸೆ.6 ರಿಂದ 8ರವರೆಗೆ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

06 September, 2020 8:20 AM IST By:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಕಳೆದ ನಾಲ್ಕೈದು ದಿನಗಳಿಂದ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಸೆ.6ರಿಂದ 8ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ತುಮಕೂರು, ಶಿವಮೊಗ್ಗ, ರಾಮನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಯಾದಗಿರಿ,  ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಶನಿವಾರ ರಾಜ್ಯದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಜಯಪುರದಲ್ಲಿ 6 ಸೆಂ.ಮೀ ಮಳೆಯಾಗಿದೆ. ಹಾಸನ 5, ಹೊಸನಗರ, ಚಾಮರಾಜನಗರ 4, ತಿಪಟೂರು, ಕೊಪ್ಪ 3, ಕಾರವಾರ, ಚಿಕ್ಕಮಗಳೂರು, ಭಾಗಮಂಡಲ 2, ಬೆಳ್ತಂಗಡಿ, ಸುಳ್ಯ, ಸಕಲೇಶಪುರ, ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.