ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 22 ರಂದು (ಶನಿವಾರ) ಭಾರಿ ಮಳೆ (Heavy rain) ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.
ಇಂದು ಮುಂಬೈನಲ್ಲಿ ಭಾರಿ ಮಳೆ ಸಾಧ್ಯತೆ:
ಮಹಾರಾಷ್ಟ್ರದ ಮುಂಬೈ ಮತ್ತು ನೆರೆಯ ಥಾಣೆ,ರಾಯಘಡ ಮತ್ತು ಪಾಲ್ವಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿದರ್ಭ ಪ್ರದೇಶದಲ್ಲಿಯೂ ಆರೇಂಜ್ ಅಲರ್ಟ್ (Orange alert) ಘೋಷಿಸಲಾಗಿದೆ.
ರಾಜಸ್ಥಾನದಲ್ಲಿ ಆ 27ರವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.